ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ಲೈನ್ ಮ್ಯಾನ್ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
9 ತಿಂಗಳ ತುಂಬು ಗರ್ಭಿಣಿಯಾದ ಪತ್ನಿ ಘಟನೆಯಿಂದ ಶಾಕ್ಗೆ ಒಳಗಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಪಿ. ಮನು (26) ಮೃತ ದುರ್ದೈವಿ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್ಮ್ಯಾನ್ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಲುವಂತೆ ಗ್ರಾಅಮಥರು ಆಗ್ರಹಿಸಿದ್ದಾರೆ. ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

