HomeKarnatakaBIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು...

BIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಬಸ್ ನಿಲ್ದಾಣದಲ್ಲಿ ಗೊರವನಹಳ್ಳಿ ದೇವಸ್ಥಾನಕ್ಕೆ ತೆರಳಲು ಮಹಿಳೆಯರಿಬ್ಬರು ಬಸ್ ಹತ್ತಲು ಮುಂದಾಗಿದ್ದ ವೇಳೆ ಇನ್ನೊಂದು ಬಸ್ ಚಾಲಕ ಬಸ್ ನ್ನು ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಎರಡು ಬಸ್ ಗಳ ಮಧ್ಯೆ ಇಬ್ಬರು ಮಹಿಳೆಯರು ಸಿಲುಕಿಕೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹ್ಹಳ್ಳಿಯ ಪಂಕಜಮ್ಮ (50), ಪುಟ್ಟತಾಯಮ್ಮ (67) ಮೃತರು.

ಮಹಿಳೆಯರು ಶುಕ್ರವಾರ ಹಿನ್ನೆಲೆಯಲ್ಲಿ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೋಗಲು ತುಮಕೂರು ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ಹತ್ತುವ ವೇಳೆ ಈ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular