HomeKarnatakaBIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ...

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ಈ ಅಪಘಾತ ಸಂಭವಿಸಿದೆ. ಹರೀಶ್ (21) ಮೃತ ದುರ್ದೈವಿ. ಬೆಂಗಳೂರು ನಗರದ ದೊಮ್ಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರ ಹರೀಶ್ ಮೇಲೆ ಹರಿದಿದೆ. ಪರಿಣಾಮ ಅಪಘಾತದ ಭೀಕರತೆಗೆ ಹರೀಶ್ ದೇಹ ಎರಡು ತುಂಡಾಗಿ ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular