HomeKarnatakaವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೂ ಮನನೊಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಗಳನ್ನು ಕೈಗೊಂಡುಬಿಡುತ್ತಾರೆ. ಇಲ್ಲೋರ್ವ ವಿದ್ಯಾರ್ಥಿ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ತುರವೆಕೆರೆ ತಾಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ಧನುಷ್ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ.

ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆ ಎಂದು ಮನೆಯಿಂದ ಹೋದವನು ಮನೆಗೆ ವಾಪಸ್ ಆಗಿಲ್ಲ. ಈ ವೇಳೆ ಕುಟುಂಬದವರು ಹುಡುಕಾಟ ನಡೆಸಿದಾಗ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆಯ ಬಳಿ ಧನುಷ್ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಅಲ್ಲಿಯೇ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆಗೂ ಮುನ್ನ ಧನುಷ್ ವಾಟ್ಸಪ್ ಸ್ಟೇಟಸ್ ಹಾಕಿದ್ದಾನೆ. ನೀನೇ ಖುಷಿಯಾಗಿರು. ನಾನು ಪ್ರಪಂಚವನ್ನೇ ಬಿಟ್ಟು ಹೋಗುತ್ತೇನೆ ಎಂದು ಬರೆದುಕೊಂಡಿದ್ದಾನೆ. ಪೋಷಕರು ತುರುವೆಕೆರೆ ಪೊಲೀಸರುಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿ ಪೊಲೀಸರು ಪರಿಶೀಲಿಸಿದಾಗ ನೀರಿನಕಟ್ಟೆಯಲ್ಲಿ ಧನುಷ್ ಶವ ಪತ್ತೆಯಾಗಿದೆ. ತುರವೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular