HomeKarnatakaಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಟಾಟಾ ಏಸ್ ವಾಹನದಲ್ಲಿದ್ದ ಭೀಮಾಬಾಯಿ(70) ಮಹಾಂತಪ್ಪ(50) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಕಲಬುರಗಿ ಜಿಲ್ಲೆಯ ಅರಳಗುಡಿ ಗ್ರಾಮದ ನಿವಾಸಿಗಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕನಾಗಿದ್ದ ಮೃತ ಮಹಾಂತಪ್ಪ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಮನೆ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕಳ್ಳಂಬೆಳ್ಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular