HomeKarnatakaBIG NEWS: ತುಮಕೂರು ಬಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ

BIG NEWS: ತುಮಕೂರು ಬಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ

ತುಮಕೂರು: ತುಮಕೂರು ಸುತ್ತಮುತ್ತ ರಾಜ್ಯದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತುಮಕೂರು ಸಮೀಪ ಎರಡು ಕಡೆ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಭೂಮಿ ಗುರುತಿಸಲಾಗಿದೆ. ವಸಂತ ನರಸಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತೆ ಇರುವ ಮೂರು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ. ತುಮಕೂರು ತಾಲೂಕಿನ ಸೀಬಿ ಹತ್ತಿರ ಐದು ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದ್ದು, ಈ ಎರಡು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular