BIG NEWS: ಬ್ಯಾಟಿಂಗ್ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ

ತುಮಕೂರು: ಬ್ಯಾಟಿಂಗ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು.

ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ಸೂಚಿಸಿದರು.

ಇನ್ನು ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.

ಈ ವೇಳೆ ಗೃಹ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read