ತುಮಕೂರು: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ತುಮಕೂರು ಜಿಲ್ಲಾಧಿಕಾರಿ ವಾಸವಾಗಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತುಮಕೂರು ನಗರದ ಶಿರಾ ಗೇಟ್ ಬಳಿ ಇರುವ ಜಿಲ್ಲಾಧಿಕಾರಿ ನಿವಾಸದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡದ ಒಂದು ಭಾಗ ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ಕಟ್ಟಡದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ಕುಟುಂಬ ವಾಸವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

