HomeKarnatakaBREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ.

ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಮನು ಪರಾರಿಯಾಗಲು ಮುಂದಾಗಿದ್ದಾನೆ ಆತ್ಮ ರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ತುಮಕೂರು ನಗರ ಠಾಣೆ ಸಿಪಿಐ ದಿನೇಶ್ ಫೈರಿಂಗ್ ಮಾಡಿದ್ದಾರೆ.

ಕುಖ್ಯಾತ ರೌಡಿ ರೋಹಿತ್ ಗ್ಯಾಂಗ್ ನಲ್ಲಿ ಮನು ಗುರುತಿಸಿಕೊಂಡಿದ್ದ. ಕೊಲೆ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಆರೋಪಿ ಮನು ಬೇಕಾಗಿದ್ದ. ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಸಂಬಂಧ ಆತನನ್ನು ಬಂಧಿಸಲಾಗಿತ್ತು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದು, ಮೊದಲು ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಬಳಿಕ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಕಾನ್ಸ್ ಟೆಬಲ್ ಚೇತನ್ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular