HomeLatest NewsBREAKING : 'ಹೇಮಾವತಿ ಲಿಂಕ್ ಕೆನಾಲ್' ವಿರೋಧಿಸಿ ತೀವ್ರಗೊಂಡ ಪ್ರತಿಭಟನೆ : 100 ಕ್ಕೂ ಹೆಚ್ಚು...

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ತೀವ್ರಗೊಂಡ ಪ್ರತಿಭಟನೆ : 100 ಕ್ಕೂ ಹೆಚ್ಚು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.!

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ, ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್ ಗೌಡ ಸೇರಿ ಹಲವರು ಸಾಥ್ ನೀಡಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲಿಯೇ ಅಡ್ಡಲಾಗಿ ಮಲಗಿ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದಾಗ್ಯೂ ಪ್ರತಿಭಟನೆ ಹಿಂಪಡೆಯದ ಹೋರಾಟಗಾರರು ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಂಕಾಪುರ ದಾರಿಯುದ್ದಕ್ಕೂ ಬ್ಯಾರಿಕೇಡ್ ಗಳನ್ನು ಅಳವಡಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular