HomeKarnataka₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಲುಕಿದ ಅಧಿಕಾರಿ ಎಂದು ಗುರುತಿಸಲಾಗಿದೆ. ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಅವರು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕಾಗಿ ನಾಗೇಶ್ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಪೈಕಿ ಮೊದಲ ಕಂತಾಗಿ ₹35 ಸಾವಿರ ನೀಡಲಾಗಿತ್ತು. ಎರಡನೇ ಕಂತಿನ ₹30 ಸಾವಿರವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ನಾಗೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪಿಐಗಳಾದ ರಾಜು, ನಿರ್ಮಲಾದೇವಿ ಹಾಗೂ ಶಾಂತಿನಾಥ್ ಹೊನ್ನೂರು ಸೇರಿದಂತೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗ ಕಾರ್ಯಕ್ರಮಗಳಲ್ಲಿ ನೇರಸಾಲ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಫಲಾಪೇಕ್ಷಿತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಪ.ಪಂ.ಕ್ಕೆ ಸೇರಿದವರಾಗಿರಬೇಕು. ವ್ಯವಸಾಯಕ್ಕೆ ಸಂಬಂಧಪಟ್ಟಂತೆ 18 ರಿಂ 60, ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2.00 ಲಕ್ಷಗಳ ಮಿತಿಯಲ್ಲಿರಬೇಕು. ಕುಟುಂಬದ ಯಾವುದೇ ಸದಸ್ಯರುವ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಮಹಿಳೆಯರಿಗೆ ಶೇ. 33 ರಷ್ಟು ಮತ್ತು ಅಂಗವಿಕಲರಿಗೆ ಶೇ.5 ರಷ್ಟು ಗುರಿಯಲ್ಲಿ ಮೀಸಲಾತಿ ಕಲ್ಪಿಸಲಾಗುವುದು.

ಆಸಕ್ತ ಅರ್ಜಿದಾರರು ವೆಬ್ ಪೋರ್ಟಲ್https://sevasindhu.karnataka.gov.in ಮೂಲಕ ದಿ:17/10/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 08182-276776 ಅಥವಾ https://kmvstdcl.karnataka.gov.in ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular