HomeKarnatakaನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು: 20 ಮಂದಿಗೆ ಗಾಯ

ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು: 20 ಮಂದಿಗೆ ಗಾಯ

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿತ್ತು. ಹೆಜ್ಜೇನು ದಾಳಿಯಿಂದಾಗಿ ಗಾಯಗೊಂಡಿದ್ದ 47 ವರ್ಷದ ವೀರಭದ್ರಯ್ಯ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular