HomeKarnatakaಬಂಡೆ ಸ್ಪೋಟದ ವೇಳೆ ಘೋರ ದುರಂತ: ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಬಂಡೆ ಸ್ಪೋಟದ ವೇಳೆ ಘೋರ ದುರಂತ: ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ತುಮಕೂರು: ಬಂಡೆ ಸ್ಪೋಟಿಸುವ ವೇಳೆ ಕಾರ್ಮಿಕ ಸಾವು ಕಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಸಮೀಪ ನಡೆದಿದೆ.

ರಾಯಚೂರು ಮೂಲದ ಕಾರ್ಮಿಕ ಬಸವರಾಜ(46) ಮೃತಪಟ್ಟವರು ಎಂದು ಹೇಳಲಾಗಿದೆ. ಸೋಲಾರ್ ಪಾರ್ಕ್ ನಿರ್ಮಿಸಲು ಬಂಡೆ ಸ್ಫೋಟಿಸುವಾಗ ದುರಂತ ಸಂಭವಿಸಿದೆ. ಮತ್ತೊಬ್ಬ ಕಾರ್ಮಿಕ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸ್ಥಳದಲ್ಲಿದ್ದ ಬಂಡೆ ಸ್ಫೋಟಿಸುವಾಗ ಘಟನೆ ನಡೆದಿದ್ದು, ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಬಂಡೆ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ. ಬಂಡೆ ಸ್ಫೋಟಿಸಿದ್ದರಿಂದ ಸಮೀಪದಲ್ಲಿ ಗುಡ್ಡಕ್ಕೂ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular