BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ಹಣ, ಗಡಿಯಾರ, ಸೀರೆ, ಕುಕ್ಕರ್ ಗಳು ವಶಕ್ಕೆ

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಹಣ, ಚಿನ್ನಾಭರಣ, ವಜ್ರ, ಗಿಫ್ಟ್ ಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆಯುತ್ತಿವೆ.

ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 70 ಲಕ್ಷ ನಗದು ಹಣವನ್ನು ಚುನಾವಣಾಧಿಕಾರಿಗಳು ಸೀಜ್ ಮಾಡುರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಈ ಬಗ್ಗೆ ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಮಾಹಿತಿ ನೀಡಿದ್ದು, ತುಮಕೂರಿನಲ್ಲಿ 70 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಇದೇ ವೇಳೆ ಆಂಧ್ರದಿಂದ ತುಮಕೂರಿಗೆ ಸಾಗಿಸುತ್ತಿದ್ದ 1000ಕ್ಕೂ ಹೆಚ್ಚು ಲೀಟರ್ ಮದ್ಯ, ಐದುವರೆ ಕೆಜಿ ಗಾಂಜಾ, ಗಡಿಯಾರ, ಸೀರೆಗಳು, ಕುಕ್ಕರ್ ಹಾಗೂ ಒಡವೆಗಳು ಸೇರಿದಂತೆ 6 ಲಕ್ಷ ಮೌಲುಗಳ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read