HomeLatest Newsತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ನಾಪತ್ತೆಯಾಗಿದ್ದ ಯುವಕನನಿಗಾಗಿ ನದಿಯಲ್ಲಿ ಶೋಧ ನಡೆಸಲಾಗಿತ್ತು. ಈ ವೇಳೆ ಮುಳುಗು ತಜ್ಞ ಈಶ್ವರ ಮಲ್ಪೆ ಯುವಕನ ಶವವನ್ನು ನದಿಯಿಂದ ಹೊರತೆಗೆದಿದ್ದಾರೆ. ಮೃತನನ್ನು ತೀರ್ಥಹಳ್ಳಿಯ ಸೀಬಿನಕೆರೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ.

ಏಪ್ರಿಲ್ 7ರಂದು ಸಂಜೆ ಕಲ್ಲು ಬಂಡೆಯ ಮೇಲೆ ಬಟ್ಟೆ, ಚಪ್ಪಲಿ ಮೊಬೈಲ್ ಇಟ್ಟು ನದಿಯಲ್ಲಿ ಈಜಲು ಹೋಗಿದ್ದ. ಈಜಲು ಹೀದವನು ವಾಪಾಸ್ ಆಗಿಲ್ಲ. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸದ್ಯ ಮೃತದೇಹವನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular