ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಟಿಬಿ ಡ್ಯಾಂ ಗೇಟ್ ಅಳವಡಿಕೆ ಯಶಸ್ವಿಯಾಗಿದೆ: ವಿಪಕ್ಷಗಳ ಟೀಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಕ್ರಸ್ಟ್ ಗೇಟ್ ಕೊಚ್ಚಿ ಹೋದ ಕೆಲವೇ ದಿನಗಳಲ್ಲಿ ಗೇಟ್ ಅಳವಡಿಕೆ ಮಾಡಿ ನೀರು ನಿಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿತ್ತು. ತ್ವರಿತವಾಗಿ ಗೇಟ್ ತಯಾರಿಸಿ ಗೇಟ್ ಅಳವಡಿಕೆ ಯಶಸ್ವಿಯಾಗಿ ನೆರವೇರಿದೆ. ಅವಘಡ ಸಂಭವಿಸಿದಾಗ ಕಾರಜೋಳ, ಬೊಮ್ಮಾಯಿ, ವಿಜಯೇಂದ್ರ, ಅಶೋಕ್ ಹಾಗೂ ಕುಮಾರಸ್ವಾಮಿ ಸೇರಿದಂತೆ ಅನೇಕರು ಟೀಕೆಗಳನ್ನು ಮಾಡಿದ್ದರು. ಅವರ ಟೀಕೆಗಳು ಸತ್ತು ಹೋದವು, ಆದರೆ ನಮ್ಮ ಕೆಲಸ ಮಾತ್ರ ಉಳಿಯಿತು. ಅದಕ್ಕೆ ನಾನು ಯಾವಾಗಲು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ ಎಂದು ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ಇದೇ ವೇಳೆ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಮಾಡುವಲ್ಲಿ ಶ್ರಮಿಸಿದ ಎಲ್ಲರಿಗೂ ಸರ್ಕಾರ ಗೌರವ ಸಲ್ಲಿಸಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read