HomeKarnatakaತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಕುರವತ್ತಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 43 ವರ್ಷದ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಗುರುತು ಪತ್ತೆಯಾಗಿಲ್ಲ.

ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮಹಿಳೆಯ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular