ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಿರುತೆರೆ ನಟ ಆಶಿಶ್ ಕಪೂರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದ ನಂತರ ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದ ನಟ ಆಶಿಶ್ ಕಪೂರ್ ಅವರನ್ನು ಶನಿವಾರ ತಿಜ್ ಹಜಾರಿ ಜಿಲ್ಲಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ ನಡೆದ ಮನೆ ಪಾರ್ಟಿಯ ಸಂದರ್ಭದಲ್ಲಿ ‘ಯೇ ರಿಷ್ತಾ’ ಖ್ಯಾತಿಯ ನಟ ವಾಶ್ ರೂಂನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿ ದೂರು ನೀಡಿದ್ದಾರೆ.
ನಟ ವೈದ್ಯಕೀಯ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಿದ್ದಾರೆ. ಇದು ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ,
ಕಪೂರ್ ಇನ್‌ಸ್ಟಾಗ್ರಾಮ್ ಮೂಲಕ ಮಹಿಳೆಯನ್ನು ಸಂಪರ್ಕಿಸಿದ್ದ ಮತ್ತು ನಂತರ ಸ್ನೇಹಿತನ ಮನೆಯಲ್ಲಿ ನಡೆದ ಪಾರ್ಟಿಗೆ ಆಹ್ವಾನಿಸಿದ್ದ. ಅಲ್ಲಿ ವಾಶ್ ರೂಂನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.