HomeLatest Newsಅತ್ಯಾಚಾರ ಪ್ರಕರಣದಲ್ಲಿ ನಟ ಆಶಿಶ್ ಕಪೂರ್ ಗೆ 14 ದಿನ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ನಟ ಆಶಿಶ್ ಕಪೂರ್ ಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಿರುತೆರೆ ನಟ ಆಶಿಶ್ ಕಪೂರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದ ನಂತರ ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದ ನಟ ಆಶಿಶ್ ಕಪೂರ್ ಅವರನ್ನು ಶನಿವಾರ ತಿಜ್ ಹಜಾರಿ ಜಿಲ್ಲಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ ನಡೆದ ಮನೆ ಪಾರ್ಟಿಯ ಸಂದರ್ಭದಲ್ಲಿ ‘ಯೇ ರಿಷ್ತಾ’ ಖ್ಯಾತಿಯ ನಟ ವಾಶ್ ರೂಂನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ವೈದ್ಯಕೀಯ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಿದ್ದಾರೆ. ಇದು ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ,

ಕಪೂರ್ ಇನ್‌ಸ್ಟಾಗ್ರಾಮ್ ಮೂಲಕ ಮಹಿಳೆಯನ್ನು ಸಂಪರ್ಕಿಸಿದ್ದ ಮತ್ತು ನಂತರ ಸ್ನೇಹಿತನ ಮನೆಯಲ್ಲಿ ನಡೆದ ಪಾರ್ಟಿಗೆ ಆಹ್ವಾನಿಸಿದ್ದ. ಅಲ್ಲಿ ವಾಶ್ ರೂಂನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular