ಇಂದು ( ಮೇ 4 ) ಪಂಚ ರಾಜ್ಯಗಳ ಮತ ಎಣಿಕೆ ನಡೆಯುತ್ತಿದ್ದು, ತಮಿಳುನಾಡು ರಾಜ್ಯದಲ್ಲಿ ಟಿವಿಕೆ ಆರಂಭಿಕ ಮುನ್ನಡೆದ ಕಾಯ್ದುಕೊಳ್ಳುವ ಮೂಲಕ ಅಚ್ಚರಿಯ ಫಲಿತಾಂಶ ಹೊರಬೀಳಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.
ಮತ ಎಣಿಕೆಯ ಆರಂಭದಲ್ಲಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದ ಟಿವಿಕೆ ಬೆಳಗ್ಗೆ 10ರ ಸಮಯಕ್ಕೆ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಶತಕದ ಹೊಸ್ತಿಲನ್ನು ದಾಟಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಇದೇ ಎಐಎಡಿಎಂಕೆ 68 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಡಿಎಂಕೆ ಕೇವಲ 51 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಒಟ್ಟು 234 ವಿಧಾನಸಭಾ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 118 ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ಸದ್ಯದ ಟ್ರೆಂಡ್ ನೋಡಿದರೆ ಟಿವಿಕೆ ಸ್ವಂತ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಹೆಜ್ಜೆ ಹಾಕಿದೆ ಎನ್ನಲಾಗುತ್ತಿದ್ದು, ಒಂದುವೇಳೆ ಸ್ಪಷ್ಟ ಬಹುಮತ ದೊರಕದಿದ್ದರೆ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳಲಿದೆಯಾ ಎಂಬ ಪ್ರಶ್ನೆ ಎದ್ದಿದೆ.

