ಇಂದು ( ಮೇ 4 ) ಪಂಚ ರಾಜ್ಯಗಳ ಮತ ಎಣಿಕೆ ನಡೆಯುತ್ತಿದ್ದು, ತಮಿಳುನಾಡು ರಾಜ್ಯದಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳಲಿದೆಯಾ ಎಂಬ ಪ್ರಶ್ನೆ ಮೂಡಿದೆ.
ಏಕೆಂದರೆ ಮತ ಎಣಿಕೆಯ ಆರಂಭದಲ್ಲಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದ ಟಿವಿಕೆ ಬೆಳಗ್ಗೆ 9.15ರ ಸಮಯಕ್ಕೆ 58 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಡಿಎಂಕೆ 47 ಕ್ಷೇತ್ರಗಳು ಹಾಗೂ ಎಐಎಡಿಎಂಕೆ 28 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ಮೂಲಕ ಟಿವಿಕೆ ರಾಜ್ಯದಲ್ಲಿ ಬಲಿಷ್ಠ ಎನಿಸಿಕೊಂಡಿರುವ ಡಿಎಂಕೆಗೆ ಆರಂಭದಲ್ಲೇ ಹಿನ್ನಡೆಯುಂಟಾಗುವಂತೆ ಮಾಡಿದೆ.
ಒಟ್ಟು 234 ವಿಧಾನಸಭಾ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 118 ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ಆರಂಭದಲ್ಲಿ ಪೆರಂಬೂರು ವಿಧಾನಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದ ವಿಜಯ್ ಇದೀಗ ತಾವು ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ.

