HomeIndiaBIG NEWS: TVS ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ; 300ಕ್ಕೂ ಹೆಚ್ಚು ಬೈಕ್...

BIG NEWS: TVS ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ; 300ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮ…!

ವಿಜಯವಾಡ: ಟಿವಿಎಸ್ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ.

ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದ ಟಿವಿಎಸ್ ಬೈಕ್ ಶೋ ರೂಮ್ ನಲ್ಲಿ ಈ ಅವಘಡ ಸಂಭವಿಸಿದೆ. ಶೋ ರೂಮ್ ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಗೋದಾಮಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

300ಕ್ಕೂ ಹೆಚ್ಚು ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. 15 ಕೋಟಿಯಷ್ಟು ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಶೋ ರೂಮ್, ಗೋದಾಮು ಹಾಗೂ ಸೇವಾ ಕೇಂದ್ರ ಒಂದೇ ಕಡೆ ಇದ್ದುದರಿಂದ ವಿಜಯವಾಡ-ಕೃಷ್ಣಾ ಜಿಲ್ಲೆಗಳಲ್ಲಿಯೇ ಇದು ಟಿವಿಎಸ್ ವಾಹನಗಳ ಪ್ರಮುಖ ಕೇಂದ್ರವಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular