HomeLatest NewsRain alert : 'ದಿತ್ವಾ' ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ...

Rain alert : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ ಮುನ್ಸೂಚನೆ.!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ, ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಡಿ.4ರಂದು ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಡಿ.5ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular