HomeLatest NewsBREAKING: ಹೃದಯವಿದ್ರಾವಕ ಘಟನೆ: ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ದುರ್ಮರಣ

BREAKING: ಹೃದಯವಿದ್ರಾವಕ ಘಟನೆ: ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ದುರ್ಮರಣ

ಧಾರವಾಡ: ಆಟವಾಡುತ್ತಿದ್ದ ಮಕ್ಕಳು ಕಾಲು ಜಾರಿ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರೂ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. 

ಮುದಸ್ಸಿರ್ ಮತ್ತು ಮುಜಮ್ಮಿಲ್ ಮೃತ ಅವಳಿ ಮಕ್ಕಳು. ಮನೆಯ ಬಳಿಯೇ ಇದ್ದ ಕೆರೆಯ ಬಳಿ ಇಬ್ಬರು ಮಕ್ಕಳು ಆಟವಾಡುತ್ತಿದ್ದರು. ಏಕಾಏಕಿ ಕಾಲು ಜಾರಿ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಕೆರೆ ನೀರಿನಲ್ಲಿ ಮುಳಿಗಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಅವಳಿ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲುಮುಟ್ತಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular