
ಹೌದು, ಗಂಡನ ಮನೆಯವರನ್ನು ಹೆದರಿಸಲು ಎಂದು ಮಹಿಳೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ತಿಳಿದು ಬಂದಿದೆ. ಹೊನ್ನಾವರದ ಬಾಡಿಗೆ ಮನೆಯೊಂದರಲ್ಲಿ ಈಕೆ ಅವಿತು ಕುಳಿತಿದ್ದರು.ಗಂಡನ ಮನೆಯವರಿಗೆ ಪಾಠ ಕಲಿಸುವ ಉದ್ದೇಶದಿಂದ ನಿವೇದಿತಾ ಈ ರೀತಿ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಪುಟ್ಟ ಮಕ್ಕಳನ್ನು ಬಿಟ್ಟು ಹೋದ ಈ ಮಹಿಳೆ ಸದ್ಯ ಕುಮಟಾ ಪೊಲೀಸರ ಅತಿಥಿಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಬಳಿಕ ಮಾಂಗಲ್ಯ ಸರ, ಕಾಲುಂಗುರಗಳನ್ನು ಸ್ಕೂಟಿಯೊಳಗೆ ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು.

