BIG NEWS : ಗಗನಸಖಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ದೌರ್ಜನ್ಯ ಎಸಗಿ ಬರ್ಬರ ಹತ್ಯೆ..!

ಮುಂಬೈ : ಗಗನಸಖಿ  ಕೊಲೆ  ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೈಂಗಿಕ ದೌರ್ಜನ್ಯ ಎಸಗಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂಬುದು ತನಿಖೆ ವೇಳೆ ಬಯಲಾಗಿದೆ.

ತರಬೇತಿ ಪಡೆಯುತ್ತಿದ್ದ ಗಗನಸಖಿ ರೂಪಲ್ ಓಗ್ರೆ ಮುಂಬೈನ ತಮ್ಮ ಫ್ಲ್ಯಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈಕೆಯನ್ನು ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ರೂಪಾಲ್ ಓಗ್ರೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಛತ್ತೀಸ್ ಗಢ ಮೂಲದ ರೂಪಲ್ ಓಗ್ರೆ ಈ ವರ್ಷದ ಏಪ್ರಿಲ್ ನಲ್ಲಿ ಏರ್ ಇಂಡಿಯಾಗೆ ಆಯ್ಕೆಯಾದ ನಂತರ ಮುಂಬೈಗೆ ಸ್ಥಳಾಂತರಗೊಂಡಿದ್ದರು.ಅಂಧೇರಿಯ ಐಷಾರಾಮಿ ಹೌಸಿಂಗ್ ಸೊಸೈಟಿಯಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ತನ್ನ ಸಹೋದರಿ ಮತ್ತು ಅವಳ ಗೆಳೆಯನೊಂದಿಗೆ ವಾಸಿಸುತ್ತಿದ್ದಳು . ಅವರು ಕೆಲವು ದಿನಗಳ ಹಿಂದೆ ತಮ್ಮ ಊರಿಗೆ ಹೋಗಿದ್ದರು. ಈ ವೇಳೆ ಅವರು ಶವವಾಗಿ ಪತ್ತೆಯಾಗಿದ್ದರು.

ಪ್ರಮುಖ ಆರೋಪಿ ವಿಕ್ರಮ್ ಅಟ್ವಾಲ್ ನನ್ನು ಬಂಧಿಸಲಾಗಿದ್ದು, ಹೌಸಿಂಗ್ ಸೊಸೈಟಿಯ ಭದ್ರತಾ ಕ್ಯಾಮೆರಾಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಫ್ಲಾಟ್ ಗೆ ನುಗ್ಗಿ ನೋಡಿದಾಗ ಓಗ್ರೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬಂದಿದೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದಾಗ ಅವಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read