HomeKarnatakaBIG NEWS : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತ ಯುವತಿ ರಕ್ತದಲ್ಲಿ ಡ್ರಗ್ಸ್...

BIG NEWS : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತ ಯುವತಿ ರಕ್ತದಲ್ಲಿ ಡ್ರಗ್ಸ್ ಪತ್ತೆ.!

ಕಾರ್ಕಳ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ರಕ್ತದ ಟೆಸ್ಟ್ ವರದಿ ಬಂದಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ವರದಿ ಬಂದಿದೆ , ಆದರೆ ಇಬ್ಬರು ಆರೋಪಿಗಳ ವರದಿ ನೆಗೇಟಿವ್ ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರಕರಣದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಡ್ರಗ್ಸ್ ಎಲ್ಲಿಂದ ಬಂತು ಎಲ್ಲಿಂದರ ಪಡೆದಿದ್ದಾರೆ ಎಂಬುವುದರ ಬಗ್ಗೆ ಪ್ರಕರಣ ದಾಖಲಾಗಿದೆ. ಸದ್ಯ ಸಂತ್ರಸ್ತೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆರೋಪಿಗಳು ಯುವತಿಯೋರ್ವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದರು. ಕಾರ್ಕಳದ ಅಯ್ಯಪ್ಪನಗರದ ಬಳಿಯ ಹಾಡಿಯಲ್ಲಿ ಕುಕ್ಕಂದೂರು ಗ್ರಾಮದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿದೆ.ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular