
MLA ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಮತ್ತು ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. ಆಗಸ್ಟ್ 11 ರಂದೇ ಈ ಬಗ್ಗೆ ಬೆಂಗಳೂರಿನ ರಾಜರಾಜೇಶ್ವರಿ ಠಾಣೆಗೆ ಅಭಿನವ ಹಾಲಶ್ರೀ ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.
ಇನ್ನೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ ಹಾಲಶ್ರೀ ಶ್ರೀಗಳ ಸುಳಿವು ಸಿಗುವ ಸಾಧ್ಯಯಿರುವ ಹಿನ್ನೆಲೆ ಆತನನ್ನು ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಮತ್ತು ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ.

