BREAKING : ‘ಮುಡಾ’ ಹಗರಣಕ್ಕೆ ಟ್ವಿಸ್ಟ್ : ‘CM’ ವಿರುದ್ಧ ಮತ್ತೊಂದು ಮಹತ್ವದ ದಾಖಲೆ ನೀಡಿದ H.D ಕುಮಾರಸ್ವಾಮಿ.!

ಬೆಂಗಳೂರು : ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. “50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು.

ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

https://twitter.com/hd_kumaraswamy/status/1826845737134547334

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read