HomeKarnataka14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬಿಡುಗಡೆಯಾದ ಬಳಿಕ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ವಿಚಾರಣೆಗೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಯಾವುದೇ ನೋಟಿಸ್ ಗೂ ಉತ್ತರ ನೀಡಿರಿಲಲ್ಲಿ. ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೋಪಿಗಳನ್ನು ಬಂದಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular