ಚಂಡೀಗಢ: ಪಾಕಿಸ್ತಾನದ ಅಧಿಕಾರಿಗಳ ಪರ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಹೈಕಮಿಷನ್ ನಲ್ಲಿ ನಿಯೋಜನೆಗೊಂಡಿದ್ದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ಗುಪ್ತಚರ ಮಹಿತಿ ಮೇರೆಗೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿತ್ತು.
ಆತನನ್ನು ವಿಚಾರಣೆ ನಡೆಸಿದ ವೇಳೆ ಸಿಕ್ಕಿದ ಮಾಹಿತಿ ಆಧಾರದಲ್ಲಿ ಮತ್ತೋರ್ವನನ್ನು ವಶಕ್ಕೆ ಪಡೆಯಲಾಗಿದೆ. ತಾವು ಹಂಚಿಕೊಂಡ ಮಾಹಿತಿಗೆ ಆರೋಪಿಗಳು ಅನ್ ಲೈನ್ ಮೂಲಕ ಹಣ ಪಡೆಯುತ್ತಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಬಂಧಿತರಿಂದ ಎರಡು ಮೊಬೈಲ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.