ಮಹಿಳಾ ಪೊಲೀಸ್ ಜತೆ ಅನುಚಿತ ವರ್ತನೆ: ಇಬ್ಬರು ಅರೆಸ್ಟ್

ಮಂಗಳೂರು: ಮಹಿಳಾ ಪೊಲೀಸ್ ಜತೆ ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ಮಂಗಳೂರು ತಾಲೂಕಿನ ತೊಕ್ಕೊಟ್ಟಿನಲ್ಲಿ ಶನಿವಾರ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ನಡೆದಿದ್ದು, ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಮಹಿಳಾ ಪೊಲೀಸ್ ಗೆ ಅಶ್ಲೀಲವಾಗಿ ಸನ್ನೆ ಮಾಡಿದ್ದಲ್ಲದೇ ಸೊಂಟಕ್ಕೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read