ಪಡುಬಿದ್ರೆ: ದಕ್ಷಿಣ ಕನ್ನಡ ಜಿಲ್ಲೆ ಪಡುಬಿದ್ರೆ ಸಮೀಪ ಮಹಾದೇವಿ ಟೂರಿಸ್ಟ್ ಎಂಬ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಪಡುಬಿದ್ರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯತಿರಾಜ್ ಶೆಟ್ಟಿ ಮತ್ತು ನವೀನ್ ಪೂಜಾರಿ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಪುಸಲಾಯಿಸಿ, ಕಳ್ಳ ಸಾಗಣೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು.
ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಮಹಾದೇವಿ ಟೂರಿಸ್ಟ್ ಹೋಂ ಕಟ್ಟಡದ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

