HomeLatest Newsಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರು ಅರೆಸ್ಟ್

ಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಗಾಂಜಾ ಹಾಗೂ ಬೈಕ್ ವಶಕ್ಕೆ ಪಡೆಯಲಿದೆ.

ಶಿವಮೊಗ್ಗ ನಗರದ ಹರಿಗೆ ಎಂಆರ್‌ಎಸ್ ಕಾಂಪೌಂಡ್ ಗೆ ಹೊಂದಿಕೊಂಡಂತೆ ಇರುವ ನಿರ್ಮಾಣ ಹಂತದಲ್ಲಿರುವ ವಡ್ಡಿನಕೊಪ್ಪ ರಂಗನಾಥ ಲೇಔಟ್‌ನ ಡಾಂಬರ್ ರಸ್ತೆಯಲ್ಲಿ, ಕೋಳಿಫಾರಂ ಶೆಡ್ ನ ಹತ್ತಿರ. ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು.

ಈ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ  ಅನಿಲ್ ಕುಮಾರ್ ಭೂಮರಡ್ಡಿ, ಕಾರಿಯಪ್ಪ ಎ.ಜಿ., ಸಿಇಎನ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಕೆ. ಆವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

  ಸಿಇಎನ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್‌ ನಿರೀಕ್ಷಕ ಮಂಜುನಾಥ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶೇಖರ್ ಎಎಸ್ಐ,  ಧರ್ಮಾ ನಾಯ್ಕ ಹೆಚ್‌ಸಿ, ಅವನಾಶ ಹೆಚ್‌ಸಿ, ನಾರಾಯಣ ಸ್ವಾಮಿ ಪಿಸಿ,  ಪಿರ್ ದೊಸ್‌ ಅಹಮದ್‌ ಪಿಸಿ, ರವಿ ಬಿ ಪಿಸಿ, ಆಂಡ್ರ್ಯೂಸ್ ಜೊನ್ಸ್ ಪಿಸಿ, ಪ್ರಮೋದ್‌ ಎಲ್ ಬಿ ಪಿಸಿ ಮತ್ತು ಸಂಗಮೇಶ ಬಿ ಸಿಪಿಸಿ ತಂಡವು  ಭಾಗಿಯಾಗಿತ್ತು.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಾರ್ತಿಕ್ ವಿ. ಅಲಿಯಾಸ್ ಸಾಪಡ್(21), ಎನ್. ರಾಜೇಶ್ ಅಲಿಯಾಸ್ ರಾಜು(24) ಅವರನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಅಂದಾಜು ಮೌಲ್ಯ 1,70,000-  ರೂಗಳ 5 ಕೆಜಿ 780 ಗ್ರಾಂ ತೂಕದ ಒಣ ಗಾಂಜಾ ಹಾಗೂ ಒಂದು ಬೈಕ್‌ ಅಮಾನತ್ತುಪಡಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular