ಶಿವಮೊಗ್ಗ: ನೀರು ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕಳವು ಮಾಡಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೋಲೀಸರು ಇಬ್ಬರು ಕಳ್ಳರನ್ನು ಸೆರೆಹಿಡಿದಿದ್ದಾರೆ. ಉಡುಪಿ ಜಿಲ್ಲೆಯ 33 ವರ್ಷದ ಮೊಹಮದ್ ಗೌಸಿಫ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ರೋಷನ್(44) ಬಂಧಿತ ಕಳ್ಳರಾಗಿದ್ದಾರೆ. ಆರೋಪಿಗಳು ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಕಳ್ಳತನ ಮಾಡಿದ್ದರು. ಗಾಯತ್ರಿ ಎಂಬವರ ಮನೆಗೆ ನುಗ್ಗಿ ಚಿನ್ನದ ಸರ ಎಗರಿಸಿದ್ದರು.
ನೀರು ಕೇಳುವ ನೆಪದಲ್ಲಿ ಮನೆಗೆ ಹೋಗಿ ಗಾಯತ್ರಿ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಖದೀಮರು ಪರಾರಿಯಾಗಿದ್ದರು. 13 ಗ್ರಾಂ ಚಿನ್ನದ ಸರವನ್ನು ಎಗರಿಸಿ ಕಳ್ಳರು ಎಸ್ಕೇಪ್ ಆಗಿದ್ದು, ತಕ್ಷಣ ಗಾಯತ್ರಿ ಕುಟುಂಬದವರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೊಲೀಸರು ಕ್ರಮ ಕೈಗೊಂಡಿದ್ದು, ತಟ್ಟಿಕೆವಿ ಗ್ರಾಮದಲ್ಲಿ ಅಡಗಿದ್ದ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

