HomeLatest Newsಜಾತಿ ಪ್ರಮಾಣ ಪತ್ರ ಪಡೆಯಲು ನಕಲಿ ಸೀಲ್, ಸಹಿ: ಇಬ್ಬರು ಅರೆಸ್ಟ್

ಜಾತಿ ಪ್ರಮಾಣ ಪತ್ರ ಪಡೆಯಲು ನಕಲಿ ಸೀಲ್, ಸಹಿ: ಇಬ್ಬರು ಅರೆಸ್ಟ್

ಶಿವಮೊಗ್ಗ: ಜಾತಿ ಪ್ರಮಾಣ ಪತ್ರ ಪಡೆಯಲು ವಂಚಿಸಿದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೊರಬ ತಾಲೂಕಿನ ಗೆಂಡ್ಲ ಹೊಸೂರು ಗ್ರಾಮದ ಕೃಷ್ಣಕುಮಾರ ಮುರಾರಿ ಮತ್ತು ಕೃತ್ಯಕ್ಕೆ ಸಹಕರಿಸಿದ ಮೊಹಮ್ಮದ್ ಜಾಫರ್ ಸಾಖಿನ್ ಅವರನ್ನು ಬಂಧಿಸಲಾಗಿದೆ. ಗೆಂಡ್ಲ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣಕುಮಾರ ಅವರ ಜಾತಿ ಭೋವಿ ಎಂದು ನಮೂದಾಗಿದೆ. ಶಾಲಾ ದೃಢೀಕರಣ ಪತ್ರದಲ್ಲಿ ಈಡಿಗ ಎಂದು ನಮೂದಿಸಲು ಶಾಲೆಯ ಮೊಹರು ಮತ್ತು ಮುಖ್ಯ ಶಿಕ್ಷಕರ ಸಹಿಯನ್ನು ನಕಲು ಮಾಡಿದ ಬಗ್ಗೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೃಷ್ಣಕುಮಾರ ಭೋವಿ ಸಮುದಾಯಕ್ಕೆ ಸೇರಿದ್ದು, ಶಾಲಾ ದೃಢೀಕರಣದಲ್ಲಿ ಹಿಂದೂ ಈಡಿಗ ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಮುಖ್ಯ ಶಿಕ್ಷಕ ಜಿ.ಎಂ. ಶಿವಕುಮಾರ ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದಾಗ ತಹಶೀಲ್ದಾರ್ ಕಚೇರಿಯಿಂದ ಈಡಿಗ ಎಂದು ಜಾತಿ ಪ್ರಮಾಣ ಪತ್ರ ಪಡೆದಿರುವುದು ದೃಢಪಟ್ಟಿದೆ. ಶಾಲೆಯ ನಕಲಿ ಸೀಲ್ ಮತ್ತು ಮುಖ್ಯ ಶಿಕ್ಷಕರ ಸಹಿ ಬಳಕೆ ಮಾಡಲಾಗಿದೆ. ಈ ಕುರಿತು ಆನವಟ್ಟಿ ಠಾಣೆಗೆ ಮುಖ್ಯ ಶಿಕ್ಷಕರು ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular