ಹೊಸಪೇಟೆ: ಪಡಿತ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 26 ಕ್ವಿಂಟಾಗೂ ಅಧಿಕ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಚಿತ್ತವಾಡ್ಗಿ ಪೊಲೀಸ್ ಠಾಣೆ ವ್ಯಾಪ್ತುಯಲ್ಲಿ ಆಟೋದಲ್ಲಿ ಸಾಗಿಸುತ್ತಿದ್ದ ಎರಡು ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದ್ದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಇದೇ ವೇಳೆ ಕೊಟ್ಟೂರು ಪಟ್ತಣದ ಪಾಳ್ಯ ರಸ್ತೆಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ಸಮೀಪ ಝೆನಾನ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ 24.30 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ವಿಜಯನಗರ್ ಎಸ್ ಪಿ ಶ್ರೀಹರಿಬಾಬು ಮಾಹಿತಿ ನೀಡಿದ್ದಾರೆ.