ಆಗ್ರಾ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ನಾಲ್ವರು ತೆರಳುತ್ತಿದ್ದ ಬೈಕ್ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡೂ ಬೈಕ್ ಗಳಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಭಗವಾನ್ ದಾಸ್, ವಕೀಲ್, ರಾಮ್ ಸ್ವರೂಪ್, ಸೋನು, ಕಿರಣ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇನ್ನೂರ್ವ ಕಿಶನ್ ವೀರ್ ಎಂಬಾತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರೆಲ್ಲರೂ ಮದುವೆ ಕಾರ್ಯಕ್ರಮದಿಂದ ವಾಪಾಸ್ ಆಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.