HomeKarnatakaBIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ನರೇಗಾ ಎಂಜಿನಿಯರ್ ಸ್ಥಳದಲ್ಲೇ ಸಾವು

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ನರೇಗಾ ಎಂಜಿನಿಯರ್ ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನರೇಗಾ ಎಂಜಿನಿಯರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ಬಸಾಪುರ ಗೇಟ್ ಬಳಿ ನಡೆದಿದೆ.

ಶರಣ್ಯ ಗೌಡ (25) ಮೃತ ಎಂಜಿನಿಯರ್. ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದವರು. ಕಳೆದ ಒಂದುವರ್ಷದಿಂದ ಸಾತನೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಎಂಜಿನಿಯರ್ ಆಗಿ ಕೆಲಸ ಮಡುತ್ತಿದ್ದರು. ಫೆ.16ರಂದು ವಿವಾಹ ನಿಶ್ಚಯವಾಗಿತ್ತು.

ಬಳೆಹೊನ್ನಿಗ ಗ್ರಾಮದಿಂದ ಹಲಗೂರು ಗ್ರಾಮದ ಕಡೆಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರಣ್ಯಾ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular