HomeKarnatakaBREAKING NEWS: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಗದಗ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಹೊರವಲಯದಲ್ಲಿ ನಡೆದಿದೆ.

ಸಮೀರ್ ಗುಡಿಸಲಮನಿ (20) ಉಳಿವೇಶ್ ಅಂಗಡಿ (16) ಮೃತ ದುರ್ದೈವಿಗಳು. ಹುಲಕೋಟಿಯ ಹೊಸಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದ ಉಳವೇಶ್ ಬೈಕ್, ಎದುರಿನಿಂದ ಬಂದ ಸಮೀರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಗಳು ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಳವೇಶ್ ಬೈಕ್ ನಲ್ಲಿದ್ದ ನೇತ್ರಾವತಿ ಎಂಬುವವರಿಗೆ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular