ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಒಂದು ಬೈಕ್ ಹೊತ್ತಿ ಉರಿದಿದೆ. ಸ್ಥಳದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಓರ್ವ ಜೊಮೆಟೊ ಫುಡ್ ಡೆಲೆವರಿ ಬಾಯ್ ಎಂದು ಗುರುತಿಸಲಾಗಿದೆ. ಇನ್ನೋರ್ವನ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಎನ್.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ