ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಒಂದೇ ಕಾಮಗಾರಿಗೆ ಎರಡು ಕಡೆ ಬಿಲ್ ಪಡೆದುಕೊಳ್ಳಲಾಗಿದೆ.
ಒಂದೇ ರಸ್ತೆ ಕಾಮಗಾರಿಗೆ ನಿರ್ಮಿತಿ ಕೇಂದ್ರ ಮತ್ತು ಬೆಟ್ಟಕೋಟೆ ಗ್ರಾಮ ಪಂಚಾಯಿತಿಯಿಂದ ಪ್ರತ್ಯೇಕವಾಗಿ ಬಿಲ್ ಮಾಡಿಕೊಳ್ಳಲಾಗಿದೆ ಎಂದು ರಾಯಸಂದ್ರ ಗ್ರಾಮಸ್ಥರು ಆರೋಪಿಸಿದ್ದಾರೆ. ಒಂದೇ ಕಾಮಗಾರಿಗೆ ಎರಡು ಕಡೆ ಬಿಲ್ ಪಡೆದುಕೊಂಡು ವಂಚಿಸಿದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿರ್ಮಿತಿ ಕೇಂದ್ರಕ್ಕೆ, ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
