HomeIndiaಎರಡು ಬಸ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 30 ಪ್ರಯಾಣಿಕರಿಗೆ ಗಂಭೀರ...

ಎರಡು ಬಸ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 30 ಪ್ರಯಾಣಿಕರಿಗೆ ಗಂಭೀರ ಗಾಯ

ಹೈದರಾಬಾದ್: ಯಾತ್ರಾರ್ಥಿಗಳ ಎರಡು ಬಸ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಶ್ರೀಕಾಕುಳಂನ ಪಲಾಸದಲ್ಲಿ ಘಟನೆ ನಡೆದಿದೆ. ಮಧ್ಯಪ್ರದೇಶದಿಂದ ತೀರ್ಥಯಾತ್ರೆಗೆಂದು ಎರಡು ಬಸ್ ಗಳಲ್ಲಿ ಸುಮಾರು ನೂರು ಯಾತ್ರಿಕರನ್ನು ಕರೆತರಲಾಗಿತ್ತು. ಪಲಾಸ್ ಬಳಿ ಎರಡು ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.

ಎರಡು ಬಸ್ ಗಳು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular