HomeKarnatakaBREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರಿನಲ್ಲಿ ದುರಂತವೊಂದು ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಈ ಘಟನೆ ನಡೆದಿದೆ. ಶಾಲೆಗಳಿಗೆ ರಜೆಯಿದ್ದ ಕಾರಣ ಮೂವರು ಮಕ್ಕಳು ಹೊಲದ ಬದುವಿಗೆ ಹಾಕಿದ್ದ ಬಂಡೆಯ ಸುತ್ತಮುತ್ತ ಆಟವಾಡುತ್ತಿದ್ದರು. ಈ ವೇಳೆ ಬೃಹತ್ ಬಂಡೆ ಮಕ್ಕಳ ಮೈಮೇಲೆ ಉರುಳಿದೆ.

ಬಂಡೆಯ ಅಡಿಯಲ್ಲಿ ಸಿಲುಕಿದ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬಾಲಕನ ಕಾಲು ಮುರಿದಿದೆ. 9 ವರ್ಷದ ಮಂಜುನಾಥ್ ಹಾಗೂ 8 ವರ್ಷದ ವೈಶಾಲಿ ಮೃತ ಮಕ್ಕಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯ ಅಂಗಳದಲ್ಲೇ ಮಕ್ಕಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular