ಕಾಸರಗೋಡು: ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯ ಕಾಂಪೌಂಡ್ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಕಾಸರಗೋಡು ಜಿಲ್ಲೆಯ ಅಡೂರು ಎಂಬಲ್ಲಿ ಘಟನೆ ನಡೆದಿದೆ. ಮುಸಾಮಿಲ್(14), ಮುನ್ಸಿರ್(10) ಮೃತಪಟ್ಟ ಮಕ್ಕಳು. ಘಟನೆಯಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡೂರು ಸಮೀಪದ ಸಂಜಕಡವು ನಿವಾಸಿ ಅಬೂಬಕರ್ ಅವರ ಮಕ್ಕಳು ಮನೆಯ ಬಳಿ ಆಟವಾಡುತ್ತಿದ್ದಾಗ ಮನೆಯ ಆವರಣ ಗೋಡೆ ಕುಸಿದು ದುರಂತ ಸಂಭವಿಸಿದೆ. ಸ್ಥಳೀಯರು ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

