ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹೊoಮ್ಮಿನಾಳ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಆರನೇ ತರಗತಿಯ ಹನುಮೇಶ್(12), 8ನೇ ತರಗತಿಯ ಯಮನೂರಪ್ಪ ಗುಡದಪ್ಪಗೌಡ(14) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಇಬ್ಬರೂ ಜಮೀನಿಗೆ ತೆರಳಿದ್ದ ವೇಳೆ ಜಮೀನು ಸಮೀಪದಲ್ಲಿ ಇದ್ದ ಕೆರೆಯಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ. ನೀರಿನ ಆಳದಲ್ಲಿ ಸಿಲುಕಿದ ಇಬ್ಬರು ಒಬ್ಬರಿಗೊಬ್ಬರು ರಕ್ಷಣೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ನೆರವಿನಿಂದ ಬಾಲಕರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
