HomeKarnatakaBREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಈ ದುರಂತ ನಡೆದಿದೆ. ಯಲ್ಲವ್ವ ಕರಿಹೊಳ(30) ಎಂಬ ಮಹಿಳೆ ಮಕ್ಕಳಾದ 5 ವರ್ಷದ ಸ್ವಾತ್ವಿಕ್ ಹಾಗೂ 1 ವರ್ಷದ ಮುತ್ತಪ್ಪ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಬೆಳಿಗ್ಗೆ ಯಲ್ಲವ್ವ ಹಾಗೂ ಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದು ಮಕ್ಕಳ ಜೊತೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular