HomeIndiaBIG NEWS: ಮಾ. 4ರಿಂದ ಎರಡು ದಿನ ಭಾರತೀಯ ಚುನಾವಣಾ ಆಯೋಗದಿಂದ ಮಹತ್ವದ ಸಮ್ಮೇಳನ

BIG NEWS: ಮಾ. 4ರಿಂದ ಎರಡು ದಿನ ಭಾರತೀಯ ಚುನಾವಣಾ ಆಯೋಗದಿಂದ ಮಹತ್ವದ ಸಮ್ಮೇಳನ

ನವದೆಹಲಿ: ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 0 ಮತ್ತು 5 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ ಅಂಡ್ ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು(ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು(ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.

ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ / ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು(ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ. ಅಲ್ಲದೆ ಎರಡು ದಿನಗಳ ಈ ಸಮ್ಮೇಳನವು ಪರಸ್ಪರರ ಅನುಭವಗಳಿಂದ ಬುದ್ದಿಮತ್ತೆ ಮತ್ತು ಪರಸ್ಪರ ಕಲಿಕೆಗೆ ರಾಜ್ಯಗಳು / ಕೇಂದ್ರಾಡಳಿತ ಚುನಾವಣಾ ಅಧಿಕಾರಿಗಳಿಗೆ ಒಂದು ವೇದಿಕೆಯನ್ನು ನೀಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.

ಎರಡನೇ ದಿನ, ರಾಜ್ಯಗಳು/ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular