ಮಡಿಕೇರಿ : ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಕೂಡ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.