HomeIndiaಸಿಬಿಎಸ್ಇ 10ನೇ ತರಗತಿಗೆ ಎರಡು ಪರೀಕ್ಷೆ: ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ಪರೀಕ್ಷೆಗೆ ಹಾಜರಾತಿ ಕಡ್ಡಾಯ

ಸಿಬಿಎಸ್ಇ 10ನೇ ತರಗತಿಗೆ ಎರಡು ಪರೀಕ್ಷೆ: ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ಪರೀಕ್ಷೆಗೆ ಹಾಜರಾತಿ ಕಡ್ಡಾಯ

ನವದೆಹಲಿ: ಈ ವರ್ಷದಿಂದ ಎರಡು ಹಂತಗಳಲ್ಲಿ ಹತ್ತನೇ ತರಗತಿ ಪರೀಕ್ಷೆ ನಡೆಸಲು ಸಿಬಿಎಸ್ಇ ಮುಂದಾಗಿದ್ದು, ಮೊದಲ ಪರೀಕ್ಷೆಗೆ ಹಾಜರಾತಿಯನ್ನು ಎಲ್ಲ ವಿದ್ಯಾರ್ಥಿಗಳಿಗೂ ಕಡ್ಡಾಯ ಮಾಡಲಾಗಿದೆ. ಹಂತ 1ರಲ್ಲಿ ಉತ್ತೀರ್ಣರಾದರೆ ಎರಡನೇ ಹಂತದಲ್ಲಿ ಫಲಿತಾಂಶ ಸುಧಾರಣೆಗೆ ಅವಕಾಶವಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಈ ವರ್ಷದಿಂದ ಎರಡು ಹಂತದಲ್ಲಿ 10ನೇ ಕ್ಲಾಸ್ ಪರೀಕ್ಷೆಯನ್ನು ಆರಂಭಿಸಿರುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶನಗಳನ್ನು ಜಾರಿ ಮಾಡಿದೆ. ಅದರಂತೆ ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಲಾಗಿದೆ.

ಮೊದಲ ಹಂತದಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾದವರಿಗೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಭಾಷೆಗಳ ಬಗ್ಗೆ ಮೂರು ವಿಷಯಗಳಲ್ಲಿ ಎರಡನೇ ಹಂತದಲ್ಲೂ ಪರೀಕ್ಷೆ ಬರೆದು ಅಂಕ ಸುಧಾರಿಸಿಕೊಳ್ಳುವ ಅವಕಾಶವಿದೆ. ಒಂದೊಮ್ಮೆ ಮೊದಲ ಹಂತದಲ್ಲಿ ಕನಿಷ್ಠ ಮೂರು ಪರೀಕ್ಷೆ ಬರೆಯದಿದ್ದರೆ ಆ ವಿದ್ಯಾರ್ಥಿಗಳು ಎರಡನೇ ಹಂತದ ಪರೀಕ್ಷೆಗೆ ಅನರ್ಹರಾತ್ತಾರೆ. ಮುಂದಿನ ವರ್ಷ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular